ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಕೇಸ್‌ನಲ್ಲಿ ಜೈಲಿನಿಂದ ರಿಲೀಸ್ ಆದ ಬಳಿಕ ಪವಿತ್ರಾ ಗೌಡ ಕಳೆದ ೮ ತಿಂಗಳಿಂದ ಮುಚ್ಚಿದ್ದ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ.
ಪವಿತ್ರಾ ಗೌಡ ರೆಡ್ ಕಾರ್ಪೆಟ್ ಸ್ಟುಡಿಯೋ ಪ್ರಾರಂಭಿಸಿದ್ದರು. ಕಳೆದ ಎಂಟು ತಿಂಗಳಿಂದ ಮುಚ್ಚಿದ್ದ ಸ್ಟುಡಿಯೋಗೆ ಇಂದು ಮರುಚಾಲನೆ ನೀಡಲಾಗಿದೆ. ಪ್ರೇಮಿಗಳ ದಿನದ ಪ್ರಯುಕ್ತ ರೆಡ್ ಕಾರ್ಪೆಟ್ ಸ್ಟುಡಿಯೋ ರೀಲಾಂಚ್ ಮಾಡಿದ್ದಾರೆ. ಸ್ಟುಡಿಯೋಗೆ ಪವಿತ್ರಾ ಗೌಡ ರೇಂಜ್ ರೋವರ್ ಕಾರ್‌ನಲ್ಲಿ ಸ್ಟೈಲಿಶ್ ಆಗಿ ಬಂದು ನೋಡುಗರ ಗಮನ ಸೆಳೆದಿದ್ದಾರೆ.