Tuesday, November 11, 2025

Red Fort blast- ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿದ್ದ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನಿನ್ನೆ ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ ಅಪಘಾತ ಸಂಭವಿಸಿದೆ. ನಿನ್ನೆ ರಾತ್ರಿಯವರೆಗೆ, ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು 20 ಜನರು ಗಾಯಗೊಂಡಿದ್ದರು.

ಇಂದು ಇನ್ನೂ ಮೂವರು ಮೃತಪಟ್ಟು, ಸಾವಿನ ಸಂಖ್ಯೆ 12 ಕ್ಕೆ ತಲುಪಿದೆ. ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

error: Content is protected !!