ಹೊಸದಿಗಂತ ವರದಿ, ಕಲಬುರ್ಗಿ :
ತೀರಾ ಸಂಕಷ್ಟದಲ್ಲಿರುವ ಪತ್ರಿಕೆಗಳನ್ನು ಉಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮುದ್ರಣ ಕಾಗದದ ಮೇಲಿನ ತೆರಿಗೆ ಇಳಿಸಲು ಕ್ರಮ ತೆಗೆದುಕೊಳ್ಳುವಂತೆ ವಿಜಯವಾಣಿ ಸಂಪಾದಕ ಚನ್ನೇಗೌಡ ಅವರು ಮುಖ್ಯಮಂತ್ರಿಯವರನ್ನು ಒತ್ತಾಯ ಮಾಡಿದರು.
ಅವರು ಮಂಗಳವಾರ ಕರ್ನಾಟಕ ಕಾರ್ಯನಿರತ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರ ಆಗಿರುವುದರಿಂದ ಮುಖ್ಯಮಂತ್ರಿಯವರು ಮನಸ್ಸು ಮಾಡಿದರೆ ಇದು ಸಾಧ್ಯವಿದೆ ಎಂದರು.
ಗ್ರಾಮೀಣ ಪತ್ರಕರ್ತರು ತೀರ ಸಂಕಟ ಎದುರಿಸುತ್ತಿದ್ದಾರೆ. ಕೋವಿಡ್ ನಂತರ ಪತ್ರಕರ್ತರ ಸಂಕಟ ಹೆಚ್ಚಿದೆ. ಹೀಗಾಗಿ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗಾಗಿ ಕಲ್ಯಾಣ ನಿಧಿ ಘೋಷಿಸಬೇಕು ಎಂದರು.
ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಉಳಿವಿಗೆ ಸರ್ಕಾರದ ನೆರವು ಬೇಕು ಎಂದರು.