ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ವಾಯು ಮಾಲಿನ್ಯ: ಶಾಲೆಗಳು ಓಪನ್, ಮನೆಯಿಂದ ಕೆಲಸ ಆದೇಶ ವಾಪಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆ ನವೆಂಬರ್ 9 ರಿಂದ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸಲು ಮತ್ತು ಶೇಕಡಾ 50 ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಬೇಕು ಎಂಬ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ಸೋಮವಾರ ನಿರ್ಧರಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು, ದೆಹಲಿಯಲ್ಲಿ ವಾಯು ಮಾಲಿನ್ಯ ಪರಿಸ್ಥಿತಿಯಲ್ಲಿ ತ್ವರಿತ ಸುಧಾರಣೆ ಕಂಡುಬಂದಿದೆ ಮತ್ತು ಕೃಷಿ ತ್ಯಾಜ್ಯ ಸುಡುವುದು ಸಹ ಕಡಿಮೆಯಾಗಿದೆ . ಹಾಗಾಗಿ ವಾಯು ಗುಣಮಟ್ಟ ನಿರ್ವಹಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ನ 4ನೇ ಹಂತದ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ತೆಗೆದುಹಾಕಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

ಇದರ ಭಾಗವಾಗಿ ನವೆಂಬರ್ 9 ರಿಂದ ಪ್ರಾಥಮಿಕ ಶಾಲೆಗಳು ಪುನರಾರಂಭಗೊಳ್ಳಲಿವೆ ಮತ್ತು ಶೇಕಡಾ 50 ರಷ್ಟು ಸರ್ಕಾರಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡಲು ನೀಡಿದ್ದ ಆದೇಶವನ್ನು ಹಿಂಪಡೆಯಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಬಿಎಸ್ VI ಅಲ್ಲದ ಡೀಸೆಲ್ ಲೈಟ್ ಮೋಟಾರು ವಾಹನಗಳ ಸಂಚಾರ ಮತ್ತು ರಾಜಧಾನಿಗೆ ಟ್ರಕ್ಗಳ ಪ್ರವೇಶದ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಕೇಂದ್ರ ವಾಯು ಗುಣಮಟ್ಟ ಸಮಿತಿ ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!