Wednesday, August 10, 2022

Latest Posts

ಕೋವಿಡ್ ಲಸಿಕೆ ಬಗ್ಗೆ ವಿಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಜನರು ನಂಬದೆ ಲಸಿಕೆ ಪಡೆಯುತ್ತಿದ್ದಾರೆ: ಶಾಸಕ ಎಸ್.ಎ.ರಾಮದಾಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸದಿಗಂತ ವರದಿ,ಮೈಸೂರು:

ಕೊರೋನಾ ಲಸಿಕೆ ಬಗ್ಗೆ ವಿಪಕ್ಷಗಳು ಎಷ್ಟೇ ಸುಳ್ಳು ಸುದ್ದಿ, ಅಪಪ್ರಚಾರಗಳನ್ನು ಮಾಡಿದರೂ, ಅದನ್ನು ನಂಬದ ಜನರು ಲಸಿಕೆಯನ್ನು ಪಡೆಯುವ ಮೂಲಕ ಸರಿಯಾದ ತಿರುಗೇಟು ನೀಡುತ್ತಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಸೋಮವಾರ ಮೈಸೂರಿನ ಜೆ.ಪಿ.ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆಯನ್ನು ಹಾಗೂ ವಿವಿಧ ಸಾಮಾಜಿಕ ಭ್ರದತಾ ಯೋಜನೆಯ ಪಿಂಚಣಿಗಾಗಿ ಅರ್ಜಿಯನ್ನು ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ, ಮಂಜೂರಾತಿ ಪತ್ರವನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಯಾವುದೇ ಒಂದು ಕಾರ್ಯವಾಗಬೇಕಾದರೆ ಒಬ್ಬನಿಂದ ಮಾಡಲು ಸಾಧ್ಯವೇ ಇಲ್ಲ, ಒಂದು ತಂಡವಾಗಿ ಕೆಲಸ ಮಾಡಿದರೆ ಮಾತ್ರ ಪ್ರತಿಫಲ ಸಿಕ್ಕುತ್ತದೆ ಎಂದು ತಿಳಿಸಿದರು. ಕೆ.ಆರ್. ಕ್ಷೇತ್ರದಲ್ಲಿ 1.60 ಲಕ್ಷಕ್ಕೂ ಅಧಿಕ ಲಸಿಕೆಯನ್ನು ನೀಡಿದ್ದೇವೆ. ಜನಸಾಮಾನ್ಯರ ಸಹಕಾರವನ್ನು ತೆಗೆದುಕೊಂಡಾಗ ಮಾತ್ರ ಒಂದು ಸಾಧನೆ ಮಾಡಲು ಸಾಧ್ಯ. ಈ ದೇಶದಲ್ಲಿ ವಿರೋಧ ಪಕ್ಷಗಳು ಲಸಿಕೆ ಬಗ್ಗೆ ಇಲ್ಲ ಸಲ್ಲದ ಅಪವಾದಗಳನ್ನು, ಸುಳ್ಳುಗಳನ್ನು ಹಬ್ಬಿಸಿದ್ದರು, ಆದರೂ ಸಹ ದೇಶದ ಜನ ಅದನ್ನೆಲ್ಲ ನಂಬದೆ, ದೊಡ್ಡ ಮಟ್ಟದಲ್ಲಿ ಲಸಿಕೆಯನ್ನು ಪಡೆಯುತ್ತಿದ್ದಾರೆ. ಒಂದನೇ ಡೋಸ್ ಮುಗಿದಿದ್ದವರಿಗೆ, ಎರಡನೇ ಡೋಸ್ ಲಸಿಕೆಗೆ ಚಾಲನೆ ನೀಡಬೇಕಿದೆ ಎಂದರು.
ಕೋವಿಡ್ ಸೊಂಕಿನಿoದ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಕೆ.ಆರ್.ಕ್ಷೇತ್ರದಲ್ಲಿ ಸಾವನ್ನಪ್ಪಿದವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿದ್ದೇವೆ. ಸಾಕಷ್ಟು ಜನರಿಗೆ ಪಿಂಚಣಿಯೂ ಕೋವಿಡ್ ಸಂದರ್ಭದಲ್ಲಿ ನಿಂತುಹೋಗಿದ್ದು, ಅಂಥವರನ್ನು ಗುರುತಿಸಿ ಪುನಃ ಪಿಂಚಣಿ ಕೊಡಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಿದೆ. ಅದನ್ನೂ ಕೂಡಾ ಮುಂದಿನ ದಿನಗಳಲ್ಲಿ ಅರ್ಹರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುವವರಿದ್ದೇವೆ. ನಮ್ಮ ವೈಯುಕ್ತಿಕ ಜವಾಬ್ದಾರಿ ಜೊತೆಗೆ ಸಾಮಾಜಿಕ ಜವಾಬ್ದಾರಿಯೂ ನಮ್ಮ ಮೇಲಿದೆ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಶಾರದಮ್ಮ ಈಶ್ವರ್, ಶಾಂತಮ್ಮ ವಡಿವೇಲು, ಉಪ ತಹಶೀಲ್ದಾರ್ ರೂಪಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹದೇವ ಪ್ರಸಾದ್, ಕೆ.ಆರ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ವಡಿವೇಲು, ಪ್ರಧಾನ ಕಾರ್ಯದರ್ಶಿಗಳಾದ ಓಂ ಶ್ರೀನಿವಾಸ್, ಜೆ.ನಾಗೇಂದ್ರ ಕುಮಾರ್, ಮುಖಂಡರಾದ ಈಶ್ವರ್, ಬಂಗಾರಿ ಸುರೇಶ್, ನಗರಪಾಲಿಕೆಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಪೊಲೀಸ್ ಠಾಣೆಯ ನಿರೀಕ್ಷಕರು ಹಾಜರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss