ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ: ಕಿಚ್ಚ ಪರ ನಿಂತ ಸಿಎಂ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ವಿವಾದಕ್ಕೆ ಕಾರಣವಾದ ಹಿಂದಿ ರಾಷ್ಟ್ರೀಯ ಭಾಷೆ ಕುರಿತ ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದ್ದು, ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ.
ನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. ಅದನ್ನೇ ಸುದೀಪ್ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನಟ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
ಹಿಂದಿ ಭಾಷೆಯ ಕುರಿತು ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ಮಧ್ಯೆ ವಿವಾದ ಎಡಿದ್ದು, ಎಲ್ಲೆಡೆ ಈಗಾಗಲೇ ಹಲವು ನಟ-ನಟಿಯರು ಸೇರಿದಂತೆ ಹಲವರು ಬೆಂಬಲ ಸೂಚಿಸಿ ಟ್ವಿಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!