ಉಚಿತ ವಿದ್ಯುತ್‌ ಯೋಜನೆ: ಗೃಹಜ್ಯೋತಿ ನೋಂದಣಿಗೆ ಇಂದೇ ಕೊನೇ ದಿನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಇಂದು ಕೊನೆಯ ದಿನವಾಗಿದೆ.

ಈ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಲು ನೊಂದಣಿ ಮಾಡಿಕೊಳ್ಳಬೇಕಿರುತ್ತದೆ. ಇನ್ನೂ ಅನೇಕ ಮಂದಿ ನೊಂದಣಿ ಮಾಡಿಕೊಳ್ಳಬೇಕಿದ್ದು, ಮೊದಲ ತಿಂಗಳಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಸೌಲಭ್ಯ ಪಡೆಯಲು ನೊಂದಣಿಗೆ ಇಂದು ಕೊನೆಯ ದಿನವಾಗಿದೆ.

ಗೃಹಜ್ಯೋತಿ ಯೋಜನೆಗೆ ಅಂತಿಮ ಗಡುವು ನಿಗದಿ ಪಡಿಸಿಲ್ಲ. ಆದರೆ ಆಗಸ್ಟ್ ತಿಂಗಳಿನಲ್ಲಿ ಉಚಿತ 200 ಯೂನಿಟ್ ವಿದ್ಯುತ್ ಪ್ರಯೋಜನ ಪಡೆಯಲು ಇಂದು ನೋಂದಣಿ ಮಾಡಿಸಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!