Saturday, July 2, 2022

Latest Posts

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗದೆ ಪ್ರಥಮ ಪಿಯುಸಿಗೆ ದಾಖಲಾತಿ ಆರಂಭಿಸುವಂತಿಲ್ಲ: ಪಿಯು ಇಲಾಖೆ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಪ್ರಥಮ ಪಿಯುಸಿ ತರಗತಿಗೆ ವಿದ್ಯಾರ್ಥಿಗಳನ್ನು 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಂದ ಬಳಿಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದಾಖಲಾತಿ ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರ ಪ್ರಾರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಖಡಕ್ ಆಗಿ ಆದೇಶಿಸಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲೆಗಳ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಪ್ರಥಮ ಪಿಯುಸಿ ತರಗತಿಗೆ ವಿದ್ಯಾರ್ಥಿಗಳಿಗೆ ದಾಖಲಾತಿಯನ್ನು 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಂದ ನಂತ್ರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯು ದಾಖಲಾತಿ ಮಾರ್ಗಸೂಚಿ-2021-22 ಬಿಡುಗಡೆ ಮಾಡಿದ ನಂತ್ರವೇ ಮಾಡಿಕೊಳ್ಳಲು ತಿಳಿಸಿದೆ. ಅಲ್ಲಿಯವರೆಗೂ ಯಾವುದೇ ರೀತಿಯಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿ ನೀಡುವಂತಿಲ್ಲ ಹಾಗೂ ಆನ್ ಲೈನ್ ತರಗತಿಗಳನ್ನು ಸಹ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.
ಯಾವುದೇ ಕಾಲೇಜುಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಗಳು ನಡೆಸಿದ ಬಗ್ಗೆ ಹಾಗೂ ಆನ್ ಲೈನ್ ತರಗತಿಗಳು ನಡೆಯುತ್ತಿರುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಕಾಲೇಜುಗಳ ಮೇಲೆ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಆ ಕಾಲೇಜುಗಳ ಮಾನ್ಯತೆ ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss