ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸಿ: ಪ್ರಿಯಾಂಕಾ ಗಾಂಧಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕಾರವಾಗದೆ ವಿಫಲವಾದ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸುವಂತೆ ಒತ್ತಾಯಿಸಿದ್ದಾರೆ. ವಿಶೇಷ ಸಂಸತ್ ಅಧಿವೇಶನದ ಕೊನೆಯ ದಿನ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಎಲ್ಲಾ ಪಕ್ಷಗಳ ಒಮ್ಮತದಿಂದ ಅಂಗೀಕರಿಸಲ್ಪಟ್ಟ ಮಸೂದೆಯನ್ನು ಪುನಃ ತರಲು ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ. ಸೋಮವಾರವೇ ಸಂಸತ್ ಅಧಿವೇಶನ ಕರೆದು ಆ … Continue reading ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸಿ: ಪ್ರಿಯಾಂಕಾ ಗಾಂಧಿ ಆಗ್ರಹ