ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ: ನಗರದ ಅಭಿವೃದ್ಧಿಗೆ ಹೆಚ್ಚು ಹುರುಪಿನಿಂದ ಕೆಲಸ ಮಾಡುತ್ತಾರೆ ಎಂದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬಿಜೆಪಿ ಶಾಸಕಿಯಾಗಿರುವ ರೇಖಾ ಗುಪ್ತಾ ಅವರು ಇಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ನಗರದ ಅಭಿವೃದ್ಧಿಗೆ ಹೆಚ್ಚು ಹುರುಪಿನಿಂದ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೇಖಾ ಗುಪ್ತಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪ್ರಧಾನಿ ಪ್ರಧಾನಿ ಮೋದಿ ಅಭಿನಂದನಾ ಸಂದೇಶವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಅವರು ತಳಮಟ್ಟದಿಂದ ಮೇಲೆ ಬಂದಿದ್ದಾರೆ. ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆ ಆಡಳಿತದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಈಗ ಶಾಸಕಿ ಹಾಗೂ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜೊತೆಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಹಿರಿಯ ನಾಯಕರು ಉಪಸ್ಥಿತರಿದ್ದರು. ಗುಪ್ತಾ ಅವರೊಂದಿಗೆ ಪರ್ವೇಶ್ ವರ್ಮಾ, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ, ರವೀಂದರ್ ಇಂದ್ರಜ್ ಸಿಂಗ್ ಮತ್ತು ಪಂಕಜ್ ಸಿಂಗ್ ಅವರು ದೆಹಲಿಯ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!