ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು
ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ್, ಕಪಿಲ್ ಮಿಶ್ರಾ, ಆಶಿಶ್ ಸೂದ್ ಮತ್ತು ಪಂಕಜ್ ಸಿಂಗ್ ಅವರ ಹೆಸರುಗಳು ಸೇರಿವೆ.
ಸಮಾರಂಭದಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಸೇರಿದಂತೆ ಎನ್‌ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.