ಹೊಸದಿಗಂತ ವರದಿ ಬೆಳಗಾವಿ:
ಜಿಲ್ಲೆಯ ಸವದತ್ತಿ ತಾಲೂಕು ಸೇರಿದಂತೆ ಮಲಪ್ರಭಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ತಕ್ಷಣವೇ ಕಾಲುವೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸವದತ್ತಿ ತಾಲೂಕಿನ ರೈತರು ಹಾಗೂ ಸಾರ್ವಜನಿಕರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪತ್ರಿಭಟಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸ್ಥಳೀಯ ಅಧಿಕಾರಿಗಳಿಗೆ ಹಾಗೂ ಜನ ಪ್ರತಿನಿಧಿಗಳಿಗೆ ಮನವಿ ಅಲ್ಲಿಸಿದರು ಯಾವುದೇ ಪ್ರಯೋಜನ ಯಾಗಿಲ್ಲ ಎಂದು ಪ್ರತಿಭಟನೆಯಲ್ಲಿ ಅಸಮಾಧಾನ ಹೋರ ಹಾಕಿದರು. ಮಲಪ್ರಭಾ ಅಚ್ಚುಕಟ್ಟು ಪ್ರದೇಶ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಅಭಾವ ಹೆಚ್ಚಾಗುತ್ತಲೆ ಇದೇ ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ದನ ಕರುಗಳು ಜಾನುವಾರುಗಳಿಗೆ ನೀರಿನ ಅಭಾವ ಹೆಚ್ಚಾಗುತ್ತಿದೆ ಎಂದರು.
ಬೇಸಿಗೆಯ ದಿನಗಳಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಮಟ್ಟದಲ್ಲಿ ಬಿಸಿಲು ಇದ್ದಿರುವುದರಿಂದ ಅಂತಜಲ ಸಂಪೂರ್ಣವಾಗಿ ಕಡಿಮೆಯಾಗಿದೆ. ಇದರಿಂದಾಗಿ ನೀರಿನ ಕೊರತೆ ಜನರ ದಿನನಿತ್ಯದ ಜೀವನವನ್ನು ದುಸ್ತರಗೊಳಿಸಿದೆ.
ಮಲಪ್ರಭಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಅತೀ ಅವಶಕವಾದ ನೀರು. ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣವೇ ಸ್ಪಂದಿಸಿ ೨ ಟಿಎಂಸಿ ನೀರನ್ನು ಕಾಲುವೆಗೆ ಬಿಡುಗಡೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರೈತರು ತಮ್ಮ ಜಿಲ್ಲಾಧಿಕಾರಿಗಳಿಗೆ ಮತ್ತು ಜಲ ಮಂಡಳಿಗೆ ಮನವಿ ಮಾಡಿಕೊಳ್ಳುವುದರ ಮೂಲಕ ಒತ್ತಾಯಿಸಿದರು.
ಈ ವೇಳೆ ಸವದತ್ತಿ ತಾಲೂಕಿನ ರೈತ ಮುಖಂಡರುಗಳು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಹಲವು ರೈತರು ಪಾಲ್ಗೊಂಡಿದ್ದರು.



