ತಮಿಳುನಾಡಿಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡಿ: ಕರ್ನಾಟಕಕ್ಕೆ ಮತ್ತೆ CWRC ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೆ CWRC ಸೂಚನೆ ನೀಡಿದೆ.

ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು,ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದಿದೆ.

ಇದೀಗ ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸಭೆಯಲ್ಲಿ ಹಳೇ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 tmc ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

ಸದ್ಯ ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ತಮಿಳುನಾಡಿನಲ್ಲಿ ಮಳೆ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅನಿಯಂತ್ರಿತ ನೀರು ನದಿ ಪಾತ್ರ ಸೇರುತ್ತಿದೆ. 3000 ಸಾವಿರ ಕ್ಯೂಸೆಕ್ ಅನಿಯಂತ್ರಿತ ನೀರು ಯಾವುದೇ ಅಡೆತಡೆ ಇಲ್ಲದೇ ತಮಿಳುನಾಡು ಸೇರುತ್ತಿದೆ. ತಮಿಳುನಾಡಿನಲ್ಲಿ ಮಳೆ ಹೆಚ್ಚಾದ್ರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕ ದಿಂದ ಪುನಃ ನೀರು ಬಿಡಲು ಸಾಧ್ಯ ಇಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

ಇತ್ತ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದೆ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಸೂಚನೆಯಂತೆ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಮಧ್ಯೆ, ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here