ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂಧರ್’ ಸಿನಿಮಾ ತೆರೆ ಮೇಲೆ ಬರಲು ಸಜ್ಜಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ಸಲ್ಮಾನ್ ಖಾನ್ ಜೊತೆಗೆ ನಟಿಸಿದ್ದಾರೆ. ಇದೀಗ ಈದ್ ಮಾತ್ರವೇ ಅಲ್ಲದೆ ಹಿಂದು ಹಬ್ಬವನ್ನೂ ಸಹ ಗಮನದಲ್ಲಿಟ್ಟುಕೊಂಡು ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಮಾಡಲಾಗಿದೆ.
ಸಾಮಾನ್ಯವಾಗಿ ಈದ್, ರಂಜಾನ್ ಹಬ್ಬಗಳಿಗೆ ಸಲ್ಮಾನ್ ಖಾನ್ ನಟನೆಯ ಸಿನಿಮಾ ಬಿಡುಗಡೆ ಆಗುತ್ತೆ. ಇದೀಗ ‘ಸಿಕಂಧರ್’ ಸಿನಿಮಾ ಈದ್ಗೆ ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಯುಗಾದಿ ಹಬ್ಬವನ್ನೂ ಸಹ ಗಣನೆಗೆ ತೆಗೆದುಕೊಂಡು ಬಿಡುಗಡೆ ದಿನಾಂಕ ನಿರ್ಧರಿಸಿದೆ ಚಿತ್ರತಂಡ.
‘ಸಿಕಂಧರ್’ ಸಿನಿಮಾ ಮಾರ್ಚ್ 30 ರಂದು ತೆರೆಗೆ ಬರಲಿದೆ. ಅದೇ ದಿನ ಯುಗಾದಿ ಹಬ್ಬವೂ ಸಹ ಇದೆ. ಯುಗಾದಿ ಹಬ್ಬವನ್ನು ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಆಚರಣೆ ಮಾಡಲಾಗುತ್ತದೆ. ಹಲವು ರಾಜ್ಯಗಳಲ್ಲಿ ಯುಗಾದಿ ಹಬ್ಬಕ್ಕೆ ರಜೆ ಸಹ ಇದೆ. ಗುಡಿ ಪಡವಾ ಎಂಬ ಹಬ್ಬವೂ ಅದೇ ದಿನ ಇದೆ. ಅದರ ಮಾರನೇಯ ದಿನ ಅಂದರೆ ಮಾರ್ಚ್ 31 ರಂದು ಈದ್ ಹಬ್ಬ ಆಚರಣೆ ಮಾಡಲಾಗುತ್ತದೆ. ಕೆಲವೆಡೆ ಏಪ್ರಿಲ್ 1 ರಂದು ಸಹ ಈದ್ ಹಬ್ಬದ ಆಚರಣೆ ಮಾಡಲಾಗುತ್ತದೆ.
‘ಸಿಕಂಧರ್’ ಸಿನಿಮಾ ಅನ್ನು ತಮಿಳಿನ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಇದೀಗ ಮೊದಲ ಬಾರಿಗೆ ಸಲ್ಮಾನ್ ಖಾನ್ಗಾಗಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ.