Friday, October 7, 2022

Latest Posts

ಸನ್ನಡತೆಯ ಆಧಾರದ ಮೇಲೆ ಕಾರಾಗೃಹದಿಂದ 20 ಕೈದಿಗಳ ಬಿಡುಗಡೆ

ಹೊಸದಿಗಂತ ವರದಿ ಮೈಸೂರು:

75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರದ ಆದೇಶದ ಮೇಲೆ ಸನ್ನಡತೆಯ ಆಧಾರದ ಮೇಲೆ ಅರ್ಹ ಅಲ್ಪಾವಧಿ ಶಿಕ್ಷಾ ಬಂಧಿಗಳನ್ನು ವಿಶೇಷ ಮಾಫಿಯೊಂದಿಗೆ ಮೊದಲ ಹಂತದಲ್ಲಿ ಸೋಮವಾರ ಅವಧಿಪೂರ್ವವಾಗಿ ಬಿಡುಗಡೆಗೊಳಿಸಲಾಯಿತು.

ಮಾಫಿ ಸೇರಿ 66% ಶಿಕ್ಷೆ ಪೂರೈಸಿದ 20ಪುರುಷರು ಅಲ್ಪಾವಧಿ ಶಿಕ್ಷಾ ಬಂಧಿಗಳಾದ ಕುಮಾರ @ಸೀನಾ, ಮಾದೆಯಾಂಡ ಸಿ.ರಾಜೇಶ್, ಶಾಂತರಾಜು, ಕುಮಾರ, ಕೃಷ್ಣ, ಮಾದವನ್, ಜಯರಾಮ, ಮಹೇಶ್, ನಂಜುಂಡ, ಪಿ.ಜಿ.ಪುಟ್ಟ, ವಿ.ಜೆ.ಹರೀಶ್, ಚಂದ್ರೇಗೌಡ, ಮಂಜು, ಶಿವಣ್ಣ, ಜಗದೀಶ್, ಅಬ್ದುಲ್ ಫಾರೂಕ್, ಕೃಷ್ಣ, ಜೇನುಕುರುಬರ ಗಣೇಶ್, ಬೆಟ್ಟಪಟ್ಟಿ, ಆರ್.ಸದಾನಂದ ಬಿಡುಗಡೆಯಾದರು.
ಈ ಸಂದರ್ಭ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!