ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ಬಂಧಿತರಾಗಿರುವ 200 ಭಾರತೀಯ ಮೀನುಗಾರರನ್ನು (Fishermen) ಗುರುವಾರ ಕರಾಚಿಯ ಜಿಲ್ಲಾ ಕಾರಾಗೃಹದಿಂದ (Jail) ಬಿಡುಗಡೆ ಮಾಡಲಾಗಿದೆ.
ಇತ್ತೀಚೆಗೆ ಪಾಕಿಸ್ತಾನದ ಕಾರಾಗೃಹದಿಂದ ಬಿಡುಗಡೆ ಮಾಡಲಾಗುತ್ತಿರುವ ಮೀನುಗಾರರ 2ನೇ ಬ್ಯಾಚ್ ಆಗಿದೆ. ಬಂಧಿತ ಮೀನುಗಾರರನ್ನು ವಾಘಾ ಗಡಿಯ ಮೂಲಕ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 12 ರಂದು 198 ಭಾರತೀಯ ಮೀನುಗಾರರನ್ನು ಮಲಿರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆರಂಭದಲ್ಲಿ 200 ಮೀನುಗಾರರನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಅವರಲ್ಲಿ ಇಬ್ಬರು ಬಿಡುಗಡೆಗೆ ಕೆಲವೇ ದಿನ ಬಾಕಿಯಿದ್ದಾಗ ಜೈಲಿನಲ್ಲಿಯೇ ಸಾವನ್ನಪ್ಪಿದ್ದರು.
ಜುಲೈ 3 ರಂದು 100 ಭಾರತೀಯ ಮೀನುಗಾರರ 3ನೇ ಬ್ಯಾಚ್ ಅನ್ನು ಪಾಕಿಸ್ತಾನದ ಜೈಲಿನಿಂದ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.