Thursday, June 1, 2023

Latest Posts

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯಾದ್ಯಂತ 214 ಕೈದಿಗಳ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ರಿಲೀಸ್ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು 81 ಮಂದಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬಿಜೆಪಿ ಸರಕಾರದ ಕ್ಯಾಬಿನೆಟ್‌ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿತ್ತು. ಬಳಿಕ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಬಿಡುಗಡೆಗೆ ಸೂಚಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗಿದ್ದ ಮೈಸೂರು ಹಾಗೂ ವಿಜಯಪುರ ಜಿಲ್ಲೆಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.

ಜೈಲಿನ ಪ್ರವೇಶ ದ್ವಾರದ ಹೊರಭಾಗದಲ್ಲಿ ಕೈದಿಗಳ ಸಂಬಂಧಿಕರು, ಸ್ನೇಹಿತರು ಸೇರಿದ್ದರು. ಇನ್ನು ಕೆಲವರು ತಾವೇ ಊರಿನತ್ತ ಹೆಜ್ಜೆ ಹಾಕಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!