ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ನಾಳೆ(ಏ.01) ರಂದು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಾಳೆಯಿಂದ ಚಾಮರಾಜನಗರ, ಮೈಸೂರು, ಬಳ್ಳಾರಿ , ಹುಬ್ಬಳ್ಳಿ, ಧಾರವಾಡದಲ್ಲಿ 12 ನೇ ತಾರೀಖಿನ ವರೆಗೂ ಪ್ರಚಾರ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಏಪ್ರಿಲ್ 13 ರಿಂದ 20 ರ ವರೆಗೆ ಅಭ್ಯರ್ಥಿಗಳ ಜೊತೆ ನಾಮಪತ್ರ ಸಲ್ಲಿಕೆಗೊ ತೆರಳುತ್ತೇನೆ. 21 ರಿಂದ 24 ವರೆಗೂ ರಾಮನಗರ, ಚನ್ನಪಟ್ಟಣದಲ್ಲಿ ಕನಕಪುರ,ಪ್ರಚಾರ ಮಾಡುತ್ತೇನೆ. 25 ರಿಂದ ಮಾರ್ಚ್ 8 ವರೆಗೂ ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಈ ಮೂಲಕ ಜೆಡಿಎಸ್ ಪರ ಅಭೂತಪೂರ್ವ ಬೆಂಬಲ ಸಿಗುವಂತೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.