ವಿರೋಧ, ಬಂದ್, ಪ್ರತಿಭಟನೆ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬೇಡಿ ಎಂದು ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಆದರೆ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುತ್ತಿರುವ ಸರ್ಕಾರ ತಮಿಳುನಾಡಿಗೆ ಕೃಷ್ಣರಾಜಸಾಗರ ಜಲಾಶಯದಿಂದ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿದೆ.

ಕೋರ್ಟ್ ನಿರ್ದೇಶನದಂತೆ 5,000 ಕ್ಯುಸೆಕ್‌ನಷ್ಟು ನೀರನ್ನು ಬಿಡಲಾಗಿದೆ. ನೀರು ಬಿಟ್ಟಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ನೀರು ಬಿಡುಗಡೆ ಮಾಡಿದರೂ ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿಲ್ಲ.

ಇತ್ತ ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಮಂಡ್ಯದಲ್ಲಿ ರೈತರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಜೆಡಿಎಸ್, ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!