ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ, ಒಂದು ಕೊಠಡಿಗೆ 12 ವಿದ್ಯಾರ್ಥಿಗಳು: SSLC ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಸಿಬ್ಬಂದಿ ಹಾಗೂ ಶಿಕ್ಷಕರ ಕರ್ತವ್ಯದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿಬ್ಬಂದಿ ಹಾಗೂ ಶಿಕ್ಷಕರ ಕರ್ತವ್ಯ ಹಾಗೂ ಜವಬ್ದಾರಿಗಳು ಏನೇನು ಎಂಬುದನ್ನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಜುಲೈ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯುತ್ತದೆ ಎನ್ನಲಾಗಿದ್ದು, ಈ ಬೆನ್ನಲ್ಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿ ಬಿಡುಗಡೆ:

  • ವಿದ್ಯಾರ್ಥಿಗಳ ನಡುವೆ ಕನಿಷ್ಠ 6 ಅಡಿ ಅಂತರವಿರಬೇಕು.
  • ಒಂದು ಡೆಸ್ಕ್​ನಲ್ಲಿ ಓರ್ವ ವಿದ್ಯಾರ್ಥಿ ಮಾತ್ರ ಕೂರುವಂತೆ ವ್ಯವಸ್ಥೆ ಮಾಡಬೇಕು.
  • ಒಂದು ಕೊಠಡಿಗೆ 12 ವಿದ್ಯಾರ್ಥಿಗಳನ್ನಷ್ಟೇ ಕೂರಿಸಬೇಕು.
  • ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸಿ ಪರೀಕ್ಷೆ ಬರೆಯಲು ಅವಕಾಶ
  • ಪರೀಕ್ಷಾ ಕೇಂದ್ರ ರಚನೆ 100 ಜನಕ್ಕೆ ಸಿಮಿತವಾಗಿರುವಂತೆ ಇರಬೇಕು.
  • ಪರೀಕ್ಷಾ ಕೇಂದ್ರ ರಚನೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಡಚಣೆಯಾಗಬಾರದುಇದಷ್ಟೇ ಅಲ್ಲದೇ ಜಿಲ್ಲಾ ನಿರ್ದೇಶಕರು ಹಾಗೂ ಉಪನಿರ್ದೇಶಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss