ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪರಿಸ್ಥಿತಿ ಹೇಗಿದೆ ಒಮ್ಮೆ ನೋಡಿ, ನ್ಯಾಯಯುತವಾಗಿ ಸಲ್ಲಬೇಕಾದ ಬರ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಒತ್ತಾಯಿಸಿದ್ದಾರೆ.
18177,44 ಕೋಟಿ ರೂಪಾಯಿ ಬರ ಪರಿಹಾರ, ಕೇಂದ್ರ ಪುರಸ್ಕೃತ ಯೋಜನೆಗಳ ಬಾಕಿ ಇರುವ 43 ಸಾವಿರ ಕೋಟಿ ರೂ. ಅನುದಾನವನ್ನು ಈಕೂಡಲೇ ಬಿಡುಗಡೆ ಮಾಡಿ. ಒಂದು ರಾಜ್ಯದ ಮುಖ್ಯಮಂತ್ರಿಯೇ ಬಂದು ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ, ಅದಕ್ಕೂ ಸ್ಪಂದನೆ ಇಲ್ಲ ಎಂದಿದ್ದಾರೆ.
ಕೇವಲ ಬರ ಪರಿಹಾರದ ಹಣ ಅಷ್ಟೇ ಅಲ್ಲ, ಜಿಎಸ್‌ಟಿಯಲ್ಲಿ ರಾಜ್ಯದ ಪಾಲು, ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಹಣ ಎಲ್ಲವನ್ನೂ ಶೀಘ್ರವೇ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.