October 23, 2026
Friday, October 23, 2026
spot_img

ರೈತರ ಬೆಳೆ ವಿಮೆ ಪ್ರೀಮಿಯಂ ಹಣ ಬಿಡುಗಡೆ ಮಾಡಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸಚಿವ ಜೋಶಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದಿಂದ ಕಂಗೆಟ್ಟಿರುವ ಲಕ್ಷಾಂತರ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರದ ಪಾಲಿನ ಬೆಳೆ ವಿಮೆ ಪ್ರೀಮಿಯಂ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಸಕಾಲಕ್ಕೆ ಪಾವತಿಸಿದ್ದರೂ, ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ಹಣಕಾಸು ಇಲಾಖೆಯಲ್ಲಿ ಬಾಕಿ ಉಳಿಸಿಕೊಂಡಿರುವುದಕ್ಕೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಪಾಲು ಪಾವತಿ

2026ರ ಮುಂಗಾರು ಹಂಗಾಮಿಗಾಗಿ ಕೇಂದ್ರ ಸರ್ಕಾರವು ತನ್ನ ಪಾಲಿನ ಶೇ. 80 ರಷ್ಟು ಅಂದರೆ ಒಟ್ಟು 1,342 ಕೋಟಿ ರೂ. ಸಹಾಯಧನವನ್ನು ಈಗಾಗಲೇ ಜುಲೈ ಮತ್ತು ಆಗಸ್ಟ್ ತಿಂಗಳಲ್ಲೇ ವಿಮಾ ಕಂಪನಿಗಳಿಗೆ ಪಾವತಿಸಿದೆ. ಆದರೆ ರಾಜ್ಯ ಸರ್ಕಾರವು ಪಾವತಿಸಬೇಕಾದ 1,680 ಕೋಟಿ ರೂ. ಪ್ರೀಮಿಯಂ ಮೊತ್ತದ ಕಡತವು ಕಳೆದ ಒಂದೂವರೆ ತಿಂಗಳಿಂದ ಹಣಕಾಸು ಇಲಾಖೆಯಲ್ಲಿ ನನೆಗುದಿಗೆ ಬಿದ್ದಿದೆ. ಇದರಿಂದಾಗಿ ಸಂಕಷ್ಟದಲ್ಲಿರುವ ರೈತರಿಗೆ ವಿಮಾ ಪರಿಹಾರ ತಲುಪಲು ದೊಡ್ಡ ಅಡಚಣೆಯಾಗಿದೆ.

ಇದನ್ನೂ ಓದಿ:

 ರೈತರ ಹಿತದೃಷ್ಟಿಯಿಂದ ಸಿಎಂ ಮಧ್ಯಪ್ರವೇಶಕ್ಕೆ ಆಗ್ರಹ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರಿಗೆ ದೊರೆಯಬೇಕಾದ ಈ ವಿಮಾ ಮೊತ್ತವು ಬರಗಾಲದ ಸಮಯದಲ್ಲಿ ದೊಡ್ಡ ಆಸರೆಯಾಗಿದೆ. ಆದರೆ ರಾಜ್ಯ ಸರ್ಕಾರದ ಆಡಳಿತಾತ್ಮಕ ವಿಳಂಬ ನೀತಿಯಿಂದಾಗಿ ರೈತರು ಕಣ್ಣೀರು ಸುರಿಸುವಂತಾಗಿದೆ ಎಂದು ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತಕ್ಷಣವೇ ಮಧ್ಯಪ್ರವೇಶಿಸಿ, ಹಣಕಾಸು ಇಲಾಖೆಯಲ್ಲಿ ಬಾಕಿಯಿರುವ ಕಡತವನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Must Read