ಹೊಸದಿಗಂತ ವರದಿ ಬಾಗಲಕೋಟೆ :
ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ವರುಣಾ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಹೊಳಬಸು ಶೆಟ್ಟರ್ ಹೇಳಿದ್ದಾರೆ.
ನದಿ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದರಿಂದ ಬಾದಾಮಿ,ರಾಮದುರ್ಗ, ಬಾಗಲಕೋಟೆ ಕ್ಷೇತ್ರದ ಕೆರೆಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜಾನುವಾರುಗಳಿಗೂ ಅನುಕೂಲ ಆಗತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಹಿರೇಮಠ ಅವರೊಂದಿಗೆ ದೆಹಲಿಯಿಂದ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸುವಂತೆ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಹೊಳಬಸು ಶೆಟ್ಟರ್ ಮಾಹಿತಿ ನೀಡಿದ್ದಾರೆ.