April 19, 2026
Sunday, April 19, 2026
spot_img

ಇರಾನ್‌ನಿಂದ ಕಚ್ಚಾ ತೈಲ ಖರೀದಿ: ವರದಿ ನಿರಾಕರಿಸಿದ ರಿಲಯನ್ಸ್‌ ಇಂಡಸ್ಟ್ರೀಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಲಯನ್ಸ್‌ ಇಂಡಸ್ಟ್ರೀಸ್‌ ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸಿದೆ ಎಂಬ ಕೆಲವು ಮಾಧ್ಯಮಗಳ ಇತ್ತೀಚಿನ ವರದಿಗಳನ್ನು ಸಂಸ್ಥೆಯು ನಿರಾಕರಿಸಿದೆ.

ಇಂಥ ವರದಿಗಳು ನಿರಾಧಾರವಾಗಿದ್ದು, ತಪ್ಪು ಮಾಹಿತಿಯನ್ನು ಒಳಗೊಂಡಿದೆ. ಹಾಗೂ ದಿಕ್ಕು ತಪ್ಪಿಸುವಂಥದ್ದು ಎಂದು ರಿಲಯನ್ಸ್‌ ಇಂಡಸ್ಟ್ರೀಸ್‌ ಸ್ಪಷ್ಟಪಡಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯನ್ನು ನಿಯಂತ್ರಿಸುವ ಸಲುವಾಗಿ ಅಮೆರಿಕವು ಇರಾನ್‌ ವಿರುದ್ಧದ ತನ್ನ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಿಲಯನ್ಸ್‌ ಇರಾನ್‌ ಮೂಲದಿಂದ ಕಚ್ಚಾ ತೈಲವನ್ನು ಖರೀದಿಸಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಸಂಪೂರ್ಣ ಆಧಾರ ರಹಿತ ಎಂದು ರಿಲಯನ್ಸ್‌ ಇಂಡಸ್ಟ್ರೀಸ್‌ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !