ನಟ ರಜನಿಕಾಂತ್ ಪತ್ನಿ ಲತಾಗೆ ರಿಲೀಫ್: ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂಪರ್ ಸ್ಟಾರ್ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು (Bail) ಮಂಜೂರು ಮಾಡಿದೆ.

2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ಖುದ್ದಾಗಿ ಲತಾ ಅವರು ಬೆಂಗಳೂರಿನ ಕೋರ್ಟಿಗೆ ಹಾಜರಾಗಿದ್ದರು.
ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು. ಅವರ ಮನವಿಯಂತೆ ಲತಾ ಹಾಜರಾದರು. ಜೊತೆಗೆ ಜಾಮೀನು ನೀಡುವಂತೆ ಲತಾ ಪರ ವಕೀಲರು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಷರತ್ತು ಬದ್ದ ಜಾಮೀನು (Bail) ಮಂಜೂರು ಮಾಡಿದೆ. ಎರಡು ವೈಯಕ್ತಿಕ ಬಾಂಡ್ ನೀಡುವಂತೆ ಸೂಚನೆ ನೀಡಿದ್ದಾರೆ.

ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು.

ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಹಾಗಾಗಿ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!