ಬಿಜೆಪಿ ನಾಯಕ ಅಣ್ಣಾಮಲೈಗೆ ರಿಲೀಫ್: ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‌ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಅಣ್ಣಾಮಲೈ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್‌ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಅಣ್ಣಾಮಲೈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸಂಜೀವ ಖನ್ನಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿ. ದೂರು ದಾಖಲಿಸಿದ ವಿ. ಪಿಯೂಷ್ ಅವರಿಗೆ ನೋಟಿಸ್ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!