Wednesday, November 30, 2022

Latest Posts

ಬಾಲಿವುಡ್ ನಟಿ ಸನ್ನಿ ಲಿಯೋನ್‌ ಗೆ ರಿಲೀಫ್: ಕ್ರಿಮಿನಲ್‌ ಕೇಸ್‌ಗೆ ತಡೆ ನೀಡಿದ ಕೇರಳ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಲಿವುಡ್ ನಟಿ ಸನ್ನಿ ಲಿಯೋನ್‌ ಅಥವಾ ಕರಣ್‌ಜೀತ್‌ ಕೌರ್‌ ವೋಹ್ರಾ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಗೆ ಕೇರಳ ಹೈಕೋರ್ಟ್‌ ಬುಧವಾರ ತಡೆ ನೀಡಿದೆ.

ಸನ್ನಿ ಲಿಯೋನ್‌, ಆಕೆಯ ಪತಿ ಡೇನಿಯಲ್‌ ವೆಬೆರ್‌ ಹಾಗೂ ಅವರ ಸಿಬ್ಬಂದಿ ವಿರುದ್ಧ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಅರ್ಜಿದಾರರು ಕೋರಿದ್ದರು. ಇನ್ನೊಂದೆಡೆ ಸನ್ನಿ ಲಿಯೋನ್‌ ತಮ್ಮ ವಿರುದ್ಧ ದಾಖಲಾಗಿರುವ ಕೇಸ್‌ ಅನ್ನು ವಜಾ ಮಾಡುವಂತೆ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿಯಾದ್‌ ರೆಹಮಾನ್‌, ಅರ್ಜಿಯ ಮುಂದಿನ ವಿಚಾರಣೆಯ ದಿನಾಂಕದವರೆಗೆ ನ್ಯಾಯಾಲಯವು ಕ್ರಿಮಿನಲ್ ಪ್ರಕ್ರಿಯೆಗಳಿಗೆ ತಡೆ ನೀಡಿದೆ.

ಕೇರಳ ಮೂಲದ ಈವೆಂಟ್ ಮ್ಯಾನೇಜರ್ , ಈವೆಂಟ್‌ಗಳಲ್ಲಿ ಭಾಗವಹಿಸಲು ಹಾಗೂ ನೃತ್ಯ ಪ್ರದರ್ಶನ ನೀಡಲು ಸನ್ನಿ ಲಿಯೋನ್‌ಗೆ ಲಕ್ಷಾಂತರ ಹಣ ಪಾವತಿ ಮಾಡಲಾಗಿತ್ತು. ಹಾಗಿದ್ದರೂ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ನೀಡಿದ ದೂರಿನ ಆಧಾರದ ಮೇಲೆಪ್ರಕರಣ ದಾಖಲಾಗಿತ್ತು.

ತಮ್ಮ ಮೇಲೆ ಹಾಕಲಾಗಿರುವ ಕೇಸ್‌ನ ವಿರುದ್ಧ ಸನ್ನಿ ಲಿಯೋನ್‌, ಅವರ ಪತಿ ಹಾಗೂ ಸಿಬ್ಬಂದಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಮ್ಮನ್ನು ನಿರಪರಾಧಿಗಳು ಎಂದು ಹೇಳಿಕೊಂಡಿದ್ದ ಅವರು, ಅವರು ಮಾಡಿರುವ ಆರೋಪಗಳನ್ನು ಗಣನೆಗೆ ತೆಗೆದುಕೊಂಡಿರೂ, ಅವರು ಹಾಕಿರುವ ಕೇಸ್‌ಗಳಿಗೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!