ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ರಿಲೀಫ್: ಎರಡು ಆರೋಪಗಳಿಂದ ಖುಲಾಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ನ್ಯಾಯಾಲಯ ವಿಧ್ವಂಸಕ ಕೃತ್ಯದ ಎರಡು ಆರೋಪಗಳಿಂದ ಖುಲಾಸೆಗೊಳಿಸಿದೆ.

ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್‌ ಖಾನ್, ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ, ಸಂವಹನ ಖಾತೆಯ ಮಾಜಿ ಸಚಿವ ಮುರದ್ ಸಯೀದ್ ಮತ್ತು ಇತರ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ (ಪಿಟಿಐ) ಪಕ್ಷದ ಮುಖಂಡರನ್ನು ‘ಹಕೀಕಿ ಆಜಾದಿ’ ಜಾಥಾ ವೇಳೆ ನಡೆದಿದ್ದ ವಿಧ್ವಂಸಕ ಕೃತ್ಯಗಳ ಆರೋಪದಿಂದ ಮುಕ್ತಗೊಳಿಸಿದೆ .

ಇಮ್ರಾನ್ ಖಾನ್ ಅವರನ್ನು ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಪದಚ್ಯುತಗೊಳಿಸಿ, ಶಹಬಾಜ್ ಷರೀಫ್ ಸರ್ಕಾರ ರಚನೆ ಮಾಡಿದ್ದರು. ಈ ವೇಳೆ ಷರೀಫ್ ಅವರ ಮೈತ್ರಿ ಸರ್ಕಾರವನ್ನು ಉರುಳಿಸಲು ಇಮ್ರಾನ್ ಇಸ್ಲಾಮಾಬಾದ್‌ನಿಂದ ಲಾಹೋರ್‌ವರೆಗೆ ಜಾಥಾ ಹಮ್ಮಿಕೊಂಡಿದ್ದರು.ಈ ವೇಳೆ ಇಮ್ರಾನ್ ಮತ್ತು ಅವರ ಪಕ್ಷದ ಇತರ 150 ಮಂದಿಯ ವಿರುದ್ಧ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!