June 19, 2026
Friday, June 19, 2026
spot_img

ಗ್ಯಾರಂಟಿ ಫಲಾನುಭವಿಗಳಿಗೆ ರಿಲೀಫ್: ವಾಪಸ್ ಅರ್ಜಿ ಹಾಕೋದು ಬೇಡ ಎಂದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈಗಾಗಲೇ ಯೋಜನೆಗಳ ಲಾಭ ಪಡೆಯುತ್ತಿರುವವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬದಲಾಗಿ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸುವ ವ್ಯವಸ್ಥೆ ಜಾರಿಯಾಗಲಿದೆ.

ಮರು ಅರ್ಜಿ ಇಲ್ಲ, ಪರಿಶೀಲನೆ ಮಾತ್ರ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ, ಹೊಸ ಅರ್ಜಿ ಪ್ರಕ್ರಿಯೆ ಬದಲಾಗಿ ಈಗಿರುವ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಲು ತೀರ್ಮಾನಿಸಲಾಗಿದೆ. ಈ ಪ್ರಕ್ರಿಯೆಯ ರೂಪುರೇಷೆಯನ್ನು ಮೂರು ದಿನಗಳಲ್ಲಿ ಅಂತಿಮಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅರ್ಹರಿಗೆ ಯಾವುದೇ ತೊಂದರೆ ಆಗಬಾರದು

ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಅನರ್ಹರು ಮಾತ್ರ ಯೋಜನೆಯ ಲಾಭ ಪಡೆಯದಂತೆ ಕಟ್ಟುನಿಟ್ಟಿನ ಕ್ರಮ ಅಗತ್ಯ ಎಂದು ಸರ್ಕಾರ ಸೂಚಿಸಿದೆ.

ಇದನ್ನೂ ಓದಿ:

ಬ್ಯಾಂಕ್ ಖಾತೆ ಬದಲಾವಣೆಗೂ ಗಮನ

ಕೆಲವು ಫಲಾನುಭವಿಗಳ ಗೃಹಲಕ್ಷ್ಮಿ ಹಣ ಸಾಲದ ಖಾತೆಗೆ ಜಮೆಯಾಗುತ್ತಿರುವ ಕಾರಣ ಅವರು ಖಾತೆ ಬದಲಾಯಿಸಿರುವ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿದೆ. ಇಂತಹವರಿಗೆ ಯೋಜನೆಯ ಸೌಲಭ್ಯ ನಿರಂತರವಾಗಿ ಸಿಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ದುರುಪಯೋಗ ತಡೆಯಲು ಹೊಸ ಕ್ರಮ

ಮೃತ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೇಲ್ವಿಚಾರಣೆಯನ್ನು ಬಲಪಡಿಸಲು ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಹಣ ಜಮೆಯಾದ ಕೂಡಲೇ ಫಲಾನುಭವಿಗಳ ಮೊಬೈಲ್‌ಗೆ ಧ್ವನಿ ಸಂದೇಶ ಕಳುಹಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !