ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ದದ ಮತಗಳ ಮರುಎಣಿಕೆ ಕೋರಿದ್ದ ಚುನಾವಣಾ ಆಯೋಗದ ತಕರಾರು ಅರ್ಜಿ ವಜಾ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮತಗಳ ಮರುಎಣಿಕೆ ಕೋರಿದ್ದ ಚುನಾವಣಾ ಆಯೋಗದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಹೈಕೋರ್ಟ್ ಪೀಠ ಚುನಾವಣಾ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಲ್ಲಿ ಕೇವಲ 105 ಮತಗಳಿಂದ ಆಯ್ಕೆಯಾಗಿದ್ದರು. ಕ್ಷೇತ್ರದ ಮತದಾರರು ಮರು ಮತ ಎಣಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದರು.

