ಎಂಎಲ್‌ಸಿ ರವಿಕುಮಾರ್ ಗೆ ರಿಲೀಫ್ : ಶಾಲಿನಿ ರಜನೀಶ್ ವಿರುದ್ಧದ ಹೇಳಿಕೆ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಹೊತ್ತಿದ್ದ ಎಂಎಲ್‌ಸಿ ಎನ್​ ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.​ ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್​ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಬಳಿಕ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ರಾಜಕೀಯ ಪಕ್ಷದ ಮೂಲಕ ಎಫ್‌ಐಆರ್ ದಾಖಲಾಗದಿದ್ದಾಗ ಸಾಮಾಜಿಕ ಕಾರ್ಯಕರ್ತರ ಮೂಲಕ ಅವರು ಎಫ್‌ಐಆರ್ ದಾಖಲಿಸಲು ಮುಂದಾದರು. ಹೀಗಾಗಿ ಪ್ರಸ್ತುತ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ವಾದಿಸಿದರು. ಅದರಂತೆ, ನ್ಯಾಯಾಲಯವು ಪ್ರಕರಣದಲ್ಲಿ ಎಫ್‌ಐಆರ್ ಮತ್ತು ಹೆಚ್ಚಿನ ತನಿಖೆಗೆ ತಡೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!