ಪ್ರಜ್ವಲ್‌ ರೇವಣ್ಣ Mass Rapist ಎಂದಿದ್ದ ರಾಗಾಗೆ ರಿಲೀಫ್‌: ಅರ್ಜಿ ವಜಾ, 25 ಸಾವಿರ ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ.

ರಾಹುಲ್‌ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್‌ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!