ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರಮ್ಯಾ ರಾವ್ ಬಂಧನವಾದ ಹಿನ್ನೆಲೆಯಲ್ಲಿ ರನ್ಯಾ ಪತಿ ಜತಿನ್ ಹುಕ್ಕೇರಿ ಬಂಧನದ ಭೀತಿಯಿಂದಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದೀ ಹೈ ಕೋರ್ಟ್ ಕಾನೂನು ಪ್ರಕ್ರಿಯೆ ಪಾಲಿಸದೆ ಬಂಧಿಸದಂತೆ ಆದೇಶ ಹೊರಡಿಸಿದೆ.
ಹೈಕೋರ್ಟ್ ನಲ್ಲಿ ಜತಿನ್ ಹುಕ್ಕೇರಿ ಪರವಾಗಿ ಪ್ರಭುಲಿಂಗ್ ನಾವದಗಿ ಅವರು ವಾದ ಮಂಡಿಸಿದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್ ಗು ಯಾವುದೇ ರೀತಿಯಾದ ಸಂಬಂಧವಿಲ್ಲ. ಡಿ ಆರ್ ಐ ಅಧಿಕಾರಿಗಳು ಸಮನ್ಸ್ ನೀಡಿದಾಗ ಜತಿನ್ ಅವರಿಗೆ ತನಿಖೆಗೆ ಸಹಕರಿಸಿದ್ದಾರೆ. ಅಲ್ಲದೆ 2ನೇ ಬಾರಿಯೂ ಕರೆದೊಯ್ದು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವಾದ ಮಂಡಿಸಿದರು.
ಈ ವಾದ ಆಲಿಸಿದ ಹೈಕೋರ್ಟ್, ಕಾನೂನಿನ ಪ್ರಕ್ರಿಯೆ ಪಾಲಿಸದೇ ಜತಿನ್ ಅವರನ್ನು ಬಂಧಿಸದಂತೆ ಆದೇಶ ಹೊರಡಿಸಿದೆ. ಇದರೊಂದಿಗೆ ರನ್ಯಾ ರಾವ್ ಪತಿಗೆ ರಿಲೀಫ್ ಸಿಕ್ಕಂತಾಗಿದೆ.