ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂರಜ್ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ.
ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ.