ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೊರಡಿಸಲಾದ ಸಮನ್ಸ್ ಕುರಿತು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸೊರೆನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಪೀಠವು ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ಜಾರಿ ಮಾಡಿತು.
ಇಡಿ ಪರ ವಕೀಲರು ವಿಚಾರಣೆ ಬಹುತೇಕ ಪೂರ್ಣಗೊಂಡಿದೆ, ಏಳು ಸಮನ್ಸ್ಗಳನ್ನು ನೀಡಲಾಗಿದೆ ಮತ್ತು ಅವರು ಒಮ್ಮೆಯೂ ಹಾಜರಾಗಿಲ್ಲ ಎಂದು ಪೀಠದ ಮುಂದೆ ವಾದಿಸಿದರು. ಸೊರೆನ್ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿ, ಅವರು ಮೂರು ಬಾರಿ ಹಾಜರಾಗಿದ್ದರು ಮತ್ತು ಇಡಿ ಅವರನ್ನು ಬಂಧಿಸಿದೆ ಎಂದು ಹೇಳಿದರು.
ನ್ಯಾಯಮೂರ್ತಿ ಬಾಗ್ಚಿ, ನ್ಯಾಯಾಂಗವು ಪರಿಣಾಮಕಾರಿಯಾದ ವಿಚಾರಣೆಯತ್ತ ಗಮನಹರಿಸಬೇಕು ಮತ್ತು ಇವು ಸುದೀರ್ಘಾವಧಿಯ ಪ್ರಾಸಿಕ್ಯೂಷನ್ ಪ್ರಕ್ರಿಯೆಯಗಳಾಗಿವೆ. ಉದ್ದೇಶ ಈಡೇರಿದೆ ಎಂದು ಅಭಿಪ್ರಾಯಪಟ್ಟರು.



