ಕಲ್ಲಡ್ಕ ಪ್ರಭಾಕರ ಭಟ್ ಗೆ ರಿಲೀಫ್: ಅಭಿಯೋಜಕರ ನೇಮಕಕ್ಕೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್ ಭಟ್ ಅವರು ನೀಡಿದ್ದ ಹೇಳಿಕೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ.

ಇದೀಗ ಈ ಎಫ್​ಐಆರ್ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ 08) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!