ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ರಕ್ಷಣೆ ನೀಡಿದೆ.
ಪ್ರಕರಣದಲ್ಲಿ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಕೆಲವು ದಿನಗಳ ನಂತರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದಿಕ್ ಅರ್ಜಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠವು , ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿನ ಮೇಲೆ ಬಂಧನ ಪೂರ್ವ ಜಾಮೀನು ನೀಡಿತು. ಜೊತೆಗೆ ಕೇರಳ ಸರ್ಕಾರ ಮತ್ತು ನಟಿಗೆ ನೋಟಿಸ್ ನೀಡಿದೆ.
ಈ ವರ್ಷದ ಆಗಸ್ಟ್ನಲ್ಲಿ ನಟಿಯೊಬ್ಬರು ಮಾಡಿದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಿಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಅತ್ಯಾಚಾರದ ಜಾಮೀನು ರಹಿತ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.