ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಪವಿತ್ರಾ ಗೌಡ ಪ್ರಯಾಗ್‌ರಾಜ್‌ನಿಂದ ಈಗ ಕಾಶಿಗೆ ಭೇಟಿ ನೀಡಿದ್ದಾರೆ. ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಕಾಶಿಯಲ್ಲಿ ನಟಿ ನೋವು ತೋಡಿಕೊಂಡಿದ್ದಾರೆ.
ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಗೆದ್ದದ್ದು ಧರ್ಮವೇ. ಮೊದಮೊದಲು ಅಧರ್ಮಕ್ಕೆ ಜಯ ಸಿಕ್ಕಿರಬಹುದು. ಆದರೆ ಕೊನೆಗೆ ಗೆಲುವಾಗುವುದು ಧರ್ಮಕ್ಕೆ ಎಂದು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಿಗೆ ನನ್ನ ವಂದನೆಗಳು. ಕೇವಲ ಕೆಲವು ಮಾಧ್ಯಮದವರ ಅಮಾನವೀಯ ಮಾತುಗಳು ಹಾಗೂ ಕೆಲ ವಿಕೃತ ಮನಸ್ಕರ ಕಾಮೆಂಟ್ ಬೇಸರ ತಂದಿದೆ. ಕಾಲಾಯ ತಸ್ಮೈ ನಮಃ ಎಂದು ಪೋಸ್ಟ್ ಮಾಡಿದ್ದಾರೆ.
ನಟಿ ಪವಿತ್ರಾ ಗೌಡ ಇದೀಗ ಮಹಾಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರಾ ಪ್ರಯಾಗ್ರಾಜ್ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮಿದ್ದೆದ್ದ ಪವಿತ್ರಾ ಗೌಡ ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೆ ಧನ್ಯಾಳು ಎಂದು ಪೋಸ್ಟ್ ಮಾಡಿದ್ದರು.