ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸ ದಿಗಂತ ವರದಿ, ವಿಜಯಪುರ:
ಅಕ್ರಮವಾಗಿ ರೆಮ್ಡಿಸಿವಿರ್ ಔಷಧಿ ಇಟ್ಟುಕೊಂಡು 22,000 ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ರಾಕೇಶ ಹಣಮಂತ ಹಲಗಣಿ ಬಂಧಿತ ಆರೋಪಿ.
ರಾಕೇಶ ಹಲಗಣಿ ಈತನು ರೆಮ್ಡಿಸಿವಿರ್ ಔಷಧಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ, ನಗರದ ದಾತ್ರಿ ಮಸೀದಿ ಹತ್ತಿರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದು, 2 ರೆಮ್ಡಿಸಿವಿರ್ ಔಷಧಿ ಬಾಟಲಿಯನ್ನು ಜಪ್ತಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಧನ್ವಂತರಿ ಆಸ್ಪತ್ರೆ ಸ್ಟಾಪ್ ನರ್ಸ್ ರೂಪಾಲಿ ರಾಕೇಶ ಹಲಗಣಿ, ಶೋಭಾ ಭೀಮಣ್ಣ ತಳವಾರ ಎಂಬ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.