#RememberingSPB – ಸಂಗೀತ ಮಾಂತ್ರಿಕ ಎಸ್‌ಪಿಬಿ ಅವರಿಗೆ ಗುರು ಕೋದಂಡಪಾಣಿ ಸಿಕ್ಕಿದ್ದು ಹೇಗೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಸ್‌ಪಿಬಿ ಅವರು ಎಂಜಿನಿಯರಿಂಗ್ ಪದವಿ ಪಡೆಯಲು ಅನಂತಪುರದ ಜೆಎನ್‌ಟಿಯು ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಕಾಲೇಜು ಬಿಡಬೇಕಾಯ್ತು. ಆದರೆ ಅವರಿಗೆ ಶಿಕ್ಷಣದ ಬಗ್ಗೆ ಆಸಕ್ತಿ ಇತ್ತು, ಎಷ್ಟೇ ಪ್ರಯತ್ನ ಪಟ್ಟರೂ ಕಾಲೇಜು, ಸಂಗೀತ ಎರಡನ್ನೂ ಒಟ್ಟಿಗೇ ನಿಭಾಯಿಸಲು ಸಾಧ್ಯವಾಗಲಿಲ್ಲ.
ನಂತರ ಚೆನ್ನೈನ ಎಂಜಿನಿಯರ್ ಸಂಸ್ಥೆಯ ಅಸೋಸಿಯೇಟ್ ಸದಸ್ಯರಾಗಿ ಸೇರಿಕೊಂಡರು. ಇದರ ಜೊತೆಗೆ ನಾನಾ ಸಂಗೀತ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಹೀಗೆ ಒಂದು ಸ್ಪರ್ಧೆಯಲ್ಲಿ ಕೋದಂಡಪಾಣಿ ಮತ್ತು ಘಂಟಸಾಲ ತೀರ್ಪುಗಾರರಾಗಿ ಬಂದಿದ್ದರು. ಎಸ್‌ಪಿಬಿ ಗಾಯಕಿ ಮೆಚ್ಚಿ ಕೋದಂಡಪಾಣಿಯವರು ಶಿಷ್ಯನಾಗಿ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!