ಆಂತರಿಕ ವಲಸಿಗರಿಗೆ ಮತದಾನದ ಹಕ್ಕು ಕಲ್ಪಿಸಲು ರಿಮೋಟ್ ಎಲೆಕ್ಟ್ರಾನಿಕ್‌ ಮತಯಂತ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚುನಾವಣೆಯಲ್ಲಿ ಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಹಾಗೂ ಆಂತರಿಕ ವಲಸಿಗರಿಗೆ ಮತದಾನದ ಹಕ್ಕು ಕಲ್ಪಿಸಲು ಕೇಂದ್ರ ಚುನಾವಣಾ ಆಯೋಗ (Election Commission of India) ರಿಮೋಟ್ ಎಲೆಕ್ಟ್ರಾನಿಕ್‌ ಮತಯಂತ್ರ (RVM) ಅಭಿವೃದ್ಧಿಪಡಿಸಿದ್ದು, ಇಂದು ಮೂಲ ಮಾದರಿಯನ್ನು ಜನಪ್ರತಿನಿಧಿಗಳಿಗೆ ಪ್ರದರ್ಶಿಸಲಾಯಿತು.

2019ರ ಸಾರ್ವತ್ರಿಕ ಚುನಾವಣೆಗಳಲ್ಲಿ (Election) ಮತದಾನದ ಪ್ರಮಾಣವು ಶೇ.67.4 ರಷ್ಟಾಗಿತ್ತು. ಈ ಚುನಾವಣೆಯಲ್ಲಿ ಸುಮಾರು 30 ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಂಡಿದ್ದರು. ಆದ್ದರಿಂದ ದೇಶದ ಆಂತರಿಕ ವಲಸೆಗರಿಗೂ ಮತದಾನದ ಹಕ್ಕು ಕಲ್ಪಿಸಲು ಆಯೋಗ ಈ ನಿರ್ಧಾರ ಕೈಗೊಂಡಿದೆ.

ಈ ರಿಮೋಟ್ ಮತಯಂತ್ರವು ದೇಶೀಯ ವಲಸಿಗರು ಮತದಾನ ಮಾಡಲು, ಜೊತೆಗೆ ಮತದಾನದ ಪ್ರಮಾಣ ಹೆಚ್ಚಿಸಲು ಅನುಕೂಲವಾಗುತ್ತದೆ’ ಎಂಬುದನ್ನು ಚುನಾವಣಾ ಆಯೋಗ ಒತ್ತಿ ಹೇಳಿದೆ.

ಏನಿದರ ಅನುಕೂಲ?
ರಿಮೋಟ್ ಎಲೆಕ್ಟ್ರಾನಿಕ್‌ ವೋಟಿಂಗ್ ಮಿಷಿನ್ (RVM) ಜಾರಿಗೆ ತರೋದ್ರಿಂದ ವಲಸೆ ಕಾರ್ಮಿಕರು ಮತದಾನ ಮಾಡಲು ತಮ್ಮ ತವರು ಕ್ಷೇತ್ರಕ್ಕೆ ಹೋಗುವ ಅಗತ್ಯವೇ ಇರುವುದಿಲ್ಲ. ಇದ್ದಲ್ಲಿಯೇ ಮತದಾನ ಮಾಡಬಹುದು. ಸಾರ್ವಜನಿಕ ವಲಯದ ಉದ್ಯಮದಿಂದ ಅಭಿವೃದ್ಧಿಪಡಿಸಲಾಗಿರುವ ರಿಮೋಟ್ ಇವಿಎಂ (EVM) ಇದಾಗಿದ್ದು, ಒಂದೇ ಮತಗಟ್ಟೆಯಿಂದ 72 ಕ್ಷೇತ್ರಗಳನ್ನು ನಿರ್ವಹಿಸಬಹುದಾಗಿದೆ. ರಿಮೋಟ್ ಮತದಾನವು ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಬಲಪಡಿಸುವ ಪರಿವರ್ತನೆಯ ಉಪಕ್ರಮವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!