Monday, July 4, 2022

Latest Posts

ಧಾರ್ಮಿಕ ಸ್ಥಳಗಳಲ್ಲಿನ ಕಾನೂನು ಬಾಹಿರ ಧ್ವನಿವರ್ಧಕಗಳನ್ನು ತೆಗೆದುಹಾಕಿ: ಯೋಗಿ ಸರ್ಕಾರದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಧಾರ್ಮಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಯೋಗಿ ಸರ್ಕಾರ ಆದೇಶ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ, ರಾಜ್ಯದ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಶನಿವಾರ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಏಪ್ರಿಲ್ 30ರೊಳಗೆ ವರದಿಯನ್ನು ಜಿಲ್ಲೆಗಳಿಂದ ಕೋರಲಾಗಿದೆ. ಅದೇ ರೀತಿ ಶಬ್ದದ ಮಿತಿ ಉಲ್ಲಂಘಿಸುವ ಧಾರ್ಮಿಕ ಸ್ಥಳಗಳನ್ನು ಪಟ್ಟಿ ಮಾಡಲು ಸ್ಥಳೀಯ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.
ಈ ಸಂಬಂಧ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಲು ಮತ್ತು ಅನಧಿಕೃತ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈವರೆಗೆ 125 ಧ್ವನಿವರ್ಧಕಗಳನ್ನು ಕೆಳಗಿಳಿಸಲಾಗಿದೆ ಮತ್ತು ಸುಮಾರು 17,000 ಸ್ಥಳಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಕಳೆದ ವಾರವಷ್ಟೇ ಸಿಎಂ ಯೋಗಿ ಅವರು ವಸತಿ ಪ್ರದೇಶಗಳಲ್ಲಿರುವ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಶಬ್ದಕ್ಕೆ ಮಿತಿ ಹೇರಲು ನಿರ್ದೇಶನ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss