ಬಹುಭಾಷಾ ನಟ, ನಿರ್ಮಾಪಕ ಪ್ರತಾಪ್ ಪೋತನ್ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಹುಭಾಷಾ ನಟ, ನಿರ್ಮಾಪಕ ಪ್ರತಾಪ್ ಪೋತನ್ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಬಹುಭಾಷಾ ನಟರಾಗಿದ್ದ ಅವರು ಮಲಯಾಳಂ, ತಮಿಳು, ತೆಲುಗು, ಹಿಂದಿ ಸಹಿತ 69 ಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಅಭಿನಯ ಛಾಪು ಮೂಡಿದ್ದರು.

ಚೆನ್ನೈನ ಅಪಾಟ್೯ ಮೆಂಟ್ ನಲ್ಲಿ ವಾಸವಾಗಿದ್ದ ಅವರು ಶುಕ್ರವಾರ ಬೆಳಗ್ಗೆ ಕೆಲಸಗಾರು ಬಂದು ನೋಡಿದಾಗ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 1980 ರ ದಶಕದಿಂದ ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಅವರು ಸಕ್ರಿಯರಾಗಿದ್ದರು.

ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಉದ್ಯಮದಲ್ಲಿ ತಮ್ಮ ಛಾಪು ಮೂಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!