ದೇಶದ ಖ್ಯಾತ ಅಗ್ನಿ ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಖ್ಯಾತ ರಾಕೆಟ್ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ (83) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಭಾರತದಲ್ಲಿ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಭಿವೃದ್ಧಿಗೆ ಅವರು ಪ್ರಮುಖ ಕೊಡುಗೆಗಳನ್ನು ನೀಡಿದ್ದಾರೆ.

ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದು ಕರೆಯಲಾಗುತ್ತದೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಆರ್ ಎನ್ ಅಗರ್ವಾಲ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಡಿಆರ್​ಡಿಓ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಅತ್ಯುತ್ತಮ ವೈಮಾನಿಕ ವಿಜ್ಞಾನಿ ಅವರ ನಿದನದಿಂದ ತುಂಬಾ ದುಃಖವಾಗಿದೆ. ಭಾರತದ ದೀರ್ಘ ವ್ಯಾಪ್ತಿಯ ಕ್ಷಿಪಣಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

ಡಾ. ಅಗರ್ವಾಲ್ ASL ನ ನಿರ್ದೇಶಕರಾಗಿ ನಿವೃತ್ತರಾದರು ಮತ್ತು ಎರಡು ದಶಕಗಳ ಕಾಲ ದೇಶದ ಮಹತ್ವಾಕಾಂಕ್ಷೆಯ ಅಗ್ನಿ ಕ್ಷಿಪಣಿ ಕಾರ್ಯಕ್ರಮವನ್ನು ಮುನ್ನಡೆಸಿದರು. ವಿಜ್ಞಾನಿಯಾಗಿ ತಮ್ಮ ವೃತ್ತಿಜೀವನದ ಅವಧಿಯಲ್ಲಿ, ಡಾ ಅಗರ್ವಾಲ್ ಅವರು ಡಾ ಅರುಣಾಚಲಂ ಮತ್ತು ಡಾ ಎಪಿಜೆ ಅಬ್ದುಲ್ ಕಲಾಂ ಅವರಂತಹ ವಿಜ್ಞಾನಿಗಳೊಂದಿಗೆ ಕೆಲಸ ಮಾಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!