October 9, 2026
Friday, October 9, 2026
spot_img

ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್‌ ಸಸಿಹಿತ್ಲು ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ, ಲೇಖಕ ಹಾಗೂ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್‌ ಸಸಿಹಿತ್ಲು ಇಂದು ನಿಧನ ಹೊಂದಿದ್ದಾರೆ.

65 ವರ್ಷದ ಪರಮಾನಂದ ಅವರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ದರುಶನಕ ಇಂದು ಸಂಜೆ ನಾಲ್ಕು ಗಂಟೆಗೆ ಸಸಿಹಿತ್ಲುವಿನ ಸ್ವಗೃಹದಲ್ಲಿ ನಡೆಯಲಿದೆ. ಇವರು ಅಜೇಯ ಮಾಸ ಪತ್ರಿಕೆಯ ಸಂಪಾದಕರಾಗಿದ್ದ ಪರಮಾನಂದ ಅವರು ಮುಂಗಾರು, ಹೊಸದಿಗಂತ ಸಹಿತ ಹಲವು ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೇವಸ್ಥಾನದ ಮಾಜಿ ಅಧ್ಯಕ್ಷರಾಗಿದ್ದರು. ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಪರಮಾನಂದ ಅವರು ಮುಂಬಯಿ ಸಹಿತ ವಿವಿಧ ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

Must Read