ಹೊಸದಿಗಂತ ಡಿಜಿಟಲ್ ಡೆಸ್ಕ್:
2024ನೇ ಸಾಲಿನ 59ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟವಾಗಿದ್ದು, ಹಿಂದಿ ಸಾಹಿತಿ ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ ನೀಡಲಾಗಿದೆ.
88 ವರ್ಷದ ಹಿಂದಿ ಬರಹಗಾರ ವಿನೋದ್ ಕುಮಾರ್ ಶುಕ್ಲಾ ಅವರನ್ನು 59ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಛತ್ತೀಸ್‌ಗಢದಿಂದ ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು ಪಡೆದ ಮೊದಲ ಲೇಖಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಸಿದ್ಧ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಈ ಪ್ರಶಸ್ತಿಯನ್ನು ಪಡೆದ 12ನೇ ಹಿಂದಿ ಸಾಹಿತಿಯಾಗಿದ್ದಾರೆ.
88 ವರ್ಷದ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಸಮಕಾಲೀನ ಹಿಂದಿ ಸಾಹಿತ್ಯದಲ್ಲಿ ಅತ್ಯಂತ ವಿಶಿಷ್ಟ ಧ್ವನಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. 11 ಲಕ್ಷ ರೂ. ನಗದು ಬಹುಮಾನ, ಕಂಚಿನ ಸರಸ್ವತಿ ಪ್ರತಿಮೆ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುವ ಈ ಪ್ರಶಸ್ತಿಯನ್ನು ಗೆದ್ದ 12ನೇ ಹಿಂದಿ ಬರಹಗಾರ ಇವರಾಗಿದ್ದಾರೆ.