ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ
ಬೆಂಗಳೂರಿನ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಹೇಗಿತ್ತು ಅವರ ಜೀವನ??
ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : 1565-1763 ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದವರು.
ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ೩೨ ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು. ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್‌ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.
ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ. ಎಸ್. ಪದ್ಮನಾಭ ಭಟ್ಟರು ರಚಿಸಿದ್ದು ನಾಡಿಗೆ ನಮಸ್ಕಾರ ಗ್ರಂಥಮಾಲೆಯಡಿ
ಕಾಂತಾವರ ಕನ್ನಡ ಸಂಘ ಪ್ರಕಟಿಸಿದೆ.
ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರವರು ಅವರ ವಿದ್ವತ್ತನ್ನು ಪುರಸ್ಕರಿಸಿ ಗೌರವಿಸಿದ್ದಾರೆ. ಗೋವಾದಲ್ಲಿ ನಡೆದ ದಕ್ಷಿಣ ಭಾರತ ಇತಿಹಾಸ ಕಾಂಗ್ರೆಸ್ಸಿನ ಮೂರನೇ ವಿಶ್ವ ಸಮ್ಮೇಳನದಲ್ಲಿ ಅವರನ್ನು ಸನ್ಮಾನಿಸಲಾಗಿದೆ. ಅವರಿಗೆ ಯುಗಪುರುಷ ಪ್ರಶಸ್ತಿ ಮತ್ತು ಕೋ. ಮ. ಕಾರಂತ ಪ್ರಶಸ್ತಿ ಲಭಿಸಿದೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತುಗಳು ಸಾಹಿತ್ಯ ಸಮ್ಮೇಳನ ಸಂದರ್ಭಗಳಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿವೆ. ಅದೇ ರೀತಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೂಡಾ ಅವರನ್ನು ಸನ್ಮಾನಿಸಿದೆ. ಅಲ್ಲದೆ ಲಂಡನ್ನಿನ ರೋಯಲ್ ಏಷಿಯಾಸ್ಟಿಕ್ ಸೊಸೈಟಿ 1983ರಲ್ಲಿ ಹಾಗೂ ಕಲ್ಕತ್ತಾದ ಇತಿಹಾಸ ಅಧ್ಯಯನ ಸಂಸ್ಥೆ 2017 ರಲ್ಲಿ ‘ಫೆಲೋ’ ಗೌರವ ನೀಡಿದೆ.
ವಸಂತ ಮಾಧವರ ಪ್ರಮುಖ ಗ್ರಂಥಗಳು : ಆಂಗ್ಲ ಭಾಷೆಯಲ್ಲಿ
1) Western Karnataka, Its Agrarian Relations
2) Research Trends in the study of History of Coastal Karnataka
3) Karnataka and Third World
4) History of Indian Movements in India
5) Karnataka – Kerala Contacts
6) The Historical Significance of Sthanikas in the Cultural History of Karnataka
7) Religions in Coasts of Karnataka
8) Some Aspects of Indian Medical History
9) Essays on Indian Medical History
ಕನ್ನಡ ಗ್ರಂಥಗಳು
1) ಮೂಲಿಕೆ ಇತಿಹಾಸ
2) ಕರಾವಳಿ ಕರ್ನಾಟಕದ ಇತಿಹಾಸ ಮತ್ತು ಸಂಶೋಧನೆ
3) ಕರಾವಳಿ ಕರ್ನಾಟಕದ ಶಾಸನಗಳ ಸಾಂಸ್ಕೃತಿಕ ಅಧ್ಯಯನ
4) ಪ್ರಾಚೀನ ಜಾಗತಿಕ ಪರಿದೃಶ್ಯದಲ್ಲಿ ಭಾರತೀಯ ವೈದ್ಯಶಾಸ್ತ್ರ
5) ಕರ್ನಾಟಕ ಸಾಂಸ್ಕೃತಿಕ ಚರಿತ್ರೆಯಲ್ಲಿ ಸ್ಥಾನಿಕರ ಮಹತ್ವ
6) ಭಾರತದ ಇತಿಹಾಸ ಗ್ರಂಥಗಳ ವಿಮರ್ಶಾತ್ಮಕ ಪರಿಚಯ
7) ಕರಾವಳಿ ಕರ್ನಾಟಕ ಸಾಂಸ್ಕೃತಿಕ ಇತಿಹಾಸದ ಆಕರಗಳು
8) ಇತಿಹಾಸ ಯಾನ – ಸಾಂಸ್ಕೃತಿಕ ನೋಟಗಳು
9) ಭಾರತೀಯ ವಿಜ್ಞಾನ ಇತಿಹಾಸ