ಖ್ಯಾತ ವಿಜ್ಞಾನಿ ಅರುಣಾಚಲಂ ನಿಧನ, ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ವಿಜ್ಞಾನಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮಾಜಿ ಮಹಾನಿರ್ದೇಶಕ ವಿ.ಎಸ್. ಅರುಣಾಚಲಂ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದ ಅರುಣಾಚಲಂ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಅರುಣಾಚಲಂ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ರಕ್ಷಣೆ ಮತ್ತು ವೈಜ್ಞಾನಿಕ ಕ್ಷೇತ್ರದ ನಕ್ಷತ್ರವೊಂದು ಬಿದ್ದುಹೋಗಿದೆ. ಅರುಣಾಚಲಂ ಅವರ ನಿಧನದಿಂದಾಗಿ ವೈಜ್ಞಾನಿಕ ಹಾಗೂ ಕಾರ್ಯತಂತ್ರ ಕ್ಷೇತ್ರದಲ್ಲಿ ದೊಡ್ಡ ಶೂನ್ಯವುಂಟಾದಂತಾಗಿದೆ. ಭಾರತದ ಭದ್ರತಾ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಅರುಣಾಲಂ ಅವರ ಕೊಡುಗೆ ಅಪಾರ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!