ಖ್ಯಾತ ರಂಗಭೂಮಿ ಕಲಾವಿದೆ, ಹಿರಿಯ ನಟಿ ಮಮತಾ ಗೂಡೂರ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ ಮಮತಾ ಗುಡೂರ ಅವರು ಇಂದು ವಿಧಿವಶರಾಗಿದ್ದಾರೆ.

ಗೂಡೂರ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ತೃತ ಕಲಾವಿದೆಯಾಗಿದ್ದ ಮಮತಾ ಗುಡೂರ ಅವರಿಗೆ ಮೆದುಳಿನ ರಕ್ತಸ್ರಾವದ ಸಮಸ್ಯೆ ಉಂಟಾಗಿತ್ತು. ಅದಕ್ಕೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಮಮತಾ ಅವರು ಐದು ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದು, 25 ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಮತಾ ಗುಡೂರ ಅವರು ವಜ್ರಮುನಿ, ಅಂಬರೀಷ್ ಸೇರಿದಂತೆ ಅನೇಕರ ಜೊತೆ ತೆರೆ ಹಂಚಿಕೊಂಡಿದ್ದರು. ಇತ್ತೀಚೆಗೆ ಕೇವಲ ನಾಟಕಗಳಲ್ಲಿ ಮಾತ್ರವೇ ಅಭಿನಯಿಸುತ್ತಿದ್ದರು.

ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಬಿಎಸ್ಆರ್ ಡ್ರಾಮಾ ಕಂಪನಿಯ ಸೆರೆ ಅಂಗಡಿ ಸಂಗವ್ವ ನಾಟಕದಲ್ಲಿ ಮನೋಜ್ಞ ಅಭಿನಯ ಮಾಡಿದ್ದ ಇವರು, ಸಂಗವ್ವ ಪಾತ್ರದಲ್ಲಿ ಖಡಕ್ ಡೈಲಾಗ್ ಹೊಡೆದು ಸೆರೆ ಅಂಗಡಿ ಸಂಗವ್ವ ಎಂದೇ ಗುರುತಿಸಿಕೊಂಡಿದ್ದರು. ಇವರ ಕಲಾಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿತ್ತು.

ಇಂದು ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಗ್ರಾಮದಲ್ಲಿ ಮುಸ್ಲಿಂ ಧರ್ಮದ ಅನುಸಾರ ಅಂತ್ಯಸಂಸ್ಕಾರ ನೆರವೇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!