ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸ್ಯಾಂಡಲ್ ವುಡ್’ಗೆ ಮತ್ತೊಂದು ಆಘಾತ. ಕವಿರತ್ನ ಕಾಳಿದಾಸ ಖ್ಯಾತಿಯ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ರೇಣುಕಾ ಶರ್ಮಾ ಅವರನ್ನು ಎರಡು ದಿನಗಳ ಹಿಂದಷ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿ, ಕ್ರಮೇಣ ಅದು ನಿಮೋನಿಯಾ ಆಗಿ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡ ರಾತ್ರಿ ನಿಧನರಾಗಿದ್ದಾರೆ.
1981ರಲ್ಲಿ ಅನುಪಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ರೇಣುಕಾ ಶರ್ಮಾ ಕಾಲಿಟ್ಟಿದ್ದರು. ಕವಿರತ್ನ ಕಾಳಿದಾಸ,ಶಹಬ್ಬಾಸ್ ವಿಕ್ರಮ್, ಸತ್ಕಾರ ಹಾಗೂ ನಮ್ಮ ಊರು ದೇವತೆ, ಅಂಜದ ಗಂಡು, ಕಿಂದರಿ ಜೋಗಿ, ಶಬರಿ ಮಲೆ ಶ್ರೀ ಅಯ್ಯಪ್ಪ, ಭರ್ಜರಿ ಗಂಡು ಹಾಗೂ ಹಟಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀ ಮೂಕಾಂಬಿಕೆ ಸಿನಿಮಾಗಳನ್ನು ನಿರ್ದೇಶಿಸಿದ್ದರು.